ಪೂಂಚ್ ಜಿಲ್ಲೆಯಲ್ಲಿ ಬಸಗಗ ದುರಂತ; 11 ಮಂದಿ ದುರ್ಮರಣ
ಜಮ್ಮು ಕಾಶ್ಮೀರ; ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭೀಕರ ದುರಂತವೊಂದು ನಡೆದುಹೋಗಿದೆ. ಮಿನಿ ಬಸ್ ಒಂದು ಕಂದಕಕ್ಕೆ ಉರುಳಿಬಿದ್ದಿದ್ದು, 11 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 26 ಮಂದಿಗೆ ಗಾಯಗಳಾಗಿದ್ದು, ತೀವ್ರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪೂಂಚ್ ಜಿಲ್ಲೆಯ ಸವ್ಜಿಯಾನ್ ಎಂಬ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಗಳು ಮುಂದುವರೆದಿವೆ.
ಅಪಘಾತದ ಸ್ಥಳದ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಬಸ್ನ ಸುತ್ತಲೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಬದುಕುಳಿದವರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.