ಮುರುಘಾ ಶರಣರಿಗೆ ಜೈಲೇ ಗತಿ; ಮತ್ತೆ 14 ದಿನ ನ್ಯಾಯಾಂಗ ಬಂಧನ
ಚಿತ್ರದುರ್ಗ; ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಸದ್ಯಕ್ಕೆ ಬಿಡುಗಡೆಯ ಭಾಗ್ಯ ಇಲ್ಲ. ಯಾಕಂದ್ರೆ ಇಂದು ಅವರ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಈ ಹಿಂದೆ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇಂದಿಗೆ ನ್ಯಾಯಾಂಗ ಬಂಧನದ ಅವಧಿ ಮುಗಿದಿದ್ದರಿಂದ ಸ್ವಾಮೀಜಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿ ಚಾರಣೆ ನಡೆಸಿದ ಜಿಲ್ಲಾ ೨ನೇ ಅಪರ ಮತ್ತು ಸತ್ರ ನ್ಯಾಯಾಲಯ ಸೆಪ್ಸೆಂಬರ್ 27ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ.
ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಇಂದಿಗೆ ಕೊನೆಯಾಗಿತ್ತು. ಇಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ, ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶಿಸಿದೆ. ಕೋರ್ಟ್‌ನಿಂದ ಶ್ರೀಗಳನ್ನು ಮತ್ತೆ ಪೊಲೀಸರು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದರು. ಈಚೆಗೆ ಮುರುಘಾ ಶ್ರೀಗಳ ವಿರುದ್ಧ ಇಬ್ಬರು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೊರಿಸಿದ್ದರು.
ಇನ್ನು ಪ್ರಕರಣದ ಎರಡನೇ ಆರೋಪಿ ಕಾಸ್ಟೆಲ್ ವಾರ್ಡನ್ ನ್ಯಾಯಾಂಗ ಬಂಧನವನ್ನು ಕೂಡಾ ಸೆಪ್ಟೆಂರ್ 27ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.