CrimeNational

ಯಡಿಯೂರಪ್ಪ ವಿರುದ್ಧ ತನಿಖೆಗೆ ಆದೇಶ; ಸುಪ್ರೀಂಕೋರ್ಟ್‌ನಲ್ಲಿ ಬಿಎಸ್‌ವೈ ಮೇಲ್ಮನವಿ

ನವದೆಹಲಿ; ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರೆ ಒಂಬತ್ತು ಮಂದಿ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಹೈಕೋರ್ಟ್‌ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ. ಇದನ್ನು ರದ್ದು ಮಾಡಬೇಕೆಂದು ಯಡಿಯೂರಪ್ಪ ಕೋರಿದ್ದಾರೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠದಲ್ಲಿ ಇಂದು ಈ ಅರ್ಜಿ ವಿಚಾರಣೆ ನಡೆಯಲಿದೆ. ಯಡಿಯೂರಪ್ಪ ಸೇರಿದಂತೆ ಒಂಬತ್ತು ಮಂದಿ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

Share Post