ವಿದ್ಯಾರ್ಥಿನಿಯರ ಖಾಸಗಿ ದೃಶ್ಯ ಚಿತ್ರೀಕರಣ ಪ್ರಕರಣ; ಸೆಪ್ಟೆಂಬರ್ 24ರವರೆಗೆ ವಿವಿಗೆ ರಜೆ
ಚಂಡೀಗಡ; ಹಾಸ್ಟೆಲ್ನಲ್ಲಿ ಹಲವು ವಿದ್ಯಾರ್ಥಿನಿಯರ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ ಎನ್ನಲಾದ ಪ್ರಕರಣದ ಹಿನ್ನೆಲೆಯಲ್ಲಿ ಪಂಜಾಬ್ನ ಮೊಹಾಲಿಯ ಚಂಡೀಗಡ ವಿಶ್ವವಿದ್ಯಾಲಯದಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 24ರವರೆಗೆ ವಿವಿಯಲ್ಲಿರುವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಸ್ಟೆಲ್ನಲ್ಲಿ 4,000ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದಾರೆ. ವಿವಿಯಲ್ಲಿ ಪ್ರತಿಭಟನೆಗಳು ನಡೆದ ಬೆನ್ನಲ್ಲೇ ಹಲವರು ಮನೆಗಳಿಗೆ ತೆರಳಿದ್ದಾರೆ. ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬರು ಇತರರ ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರೀಕರಿಸಿ ತನ್ನ ಗೆಳೆಯರಿಗೆ ಕಳುಹಿಸಿದ್ದರು ಎಂಬುದು ವದಂತಿ. ಒಬ್ಬ ವಿದ್ಯಾರ್ಥಿನಿಯು ತನ್ನ ವಿಡಿಯೊವನ್ನು ಯುವಕನೊಬ್ಬನ ಜೊತೆ ಹಂಚಿಕೊಂಡಂತೆ ಕಾಣಿಸುತ್ತಿದೆ. ಇತರ ಯಾವುದೇ ವಿದ್ಯಾರ್ಥಿನಿಯ ಆಕ್ಷೇಪಾರ್ಹವಾದ ವಿಡಿಯೊ ಸಿಕ್ಕಿಲ್ಲ ಎಂದು ಪಂಜಾಬ್ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ ಗುರ್ಪ್ರೀತ್ ಕೌರ್ ಹೇಳಿದ್ದಾರೆ.