CrimeDistricts

ಮಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರ ವಶಕ್ಕೆ; ಅಜ್ಞಾತ ಸ್ಥಳದಲ್ಲಿ ವಿಚಾರಣೆ

ಮಂಗಳೂರು; ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಬ್ಬ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನ್ಸರ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅಜ್ಞಾತ ಸ್ಥಳದಲ್ಲಿ ಆತನ ವಿಚಾರಣೆ ನಡೆಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ಬಂಧಿತರಾಗಿರುವವರ ಜೊತೆ ಅನ್ಸರ್‌ ನಂಟು ಹೊಂದಿದ್ದಾನೆ. ಈ ಹಿನ್ನೆಲೆಯಲ್ಲಿ ಅನ್ಸರ್‌ಗೂ ಐಸಿಸ್‌ಗೂ ಸಂಬಂಧ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಅನ್ಸರ್‌ನನ್ನು ಪೊಲೀಸರು ತೀವ್ರ ವಿಚಾರಣೆಗೊಳಿಪಡಿಸಿದ್ದಾರೆ. ಇನ್ನೊಬ್ಬ ಆರೋಪಿ ಶರೀಕ್‌ಗಾಗಿ ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ.

 

ಶರೀಕ್‌

Share Post