CrimeDistricts

ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

ಮಂಗಳೂರು; ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನೈನಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಕುಡ್ಲ ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ.

ಸೆಪ್ಟೆಂಬರ್‌ 21 ರಂದು ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್‍ನಲ್ಲಿದ್ದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು. ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಹಾಸ್ಟೆಲ್‍ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದರು. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು. ಇದೀಗ ಅವರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ.

ಮಂಗಳೂರಿನಿಂದ ರೈಲಿನ ಮೂಲಕ ಕೊಯಂಬತ್ತೂರು ತೆರಳಿದ್ದ ಅವರು, ಕೊಯಂಬತ್ತೂರಿನಿಂದ ಬಸ್ ಮೂಲಕ ಪಾಂಡಿಚೇರಿಗೆ ಹೋಗಿದ್ದರು. ಅನಂತರ ಮತ್ತೆ ಪಾಂಡಿಚೇರಿಯಿಂದ ವಾಪಸ್ ಚೆನೈಗೆ ಬಂದಿದ್ದರು. ದೂರದ ಊರು ಸುತ್ತಾಡಿ ಮರಳಿ ಮನೆ ಸೇರಲು ವಿದ್ಯಾರ್ಥಿನಿಯರು ನಿರ್ಧರಿಸಿದ್ದರು ಎಂದು ತಿಳಿದುಬಂದಿದೆ.

 

Share Post