ಶಂಕಿತ ಉಗ್ರನ ತಂದೆ ಮರಣ; ಅಂತ್ಯಕ್ರಿಯೆಯಲ್ಲಿ ಮಾಝ್ ಭಾಗಿ
ಶಿವಮೊಗ್ಗ; ಇತ್ತೀಚೆಗೆ ಬಂಧಿತನಾಗಿದ್ದ ಶಂಕಿತ ಉಗ್ರರ ಪೈಕಿ ಒಬ್ಬನಾದ ಮಾಝ್ ಅವರ ತಂದೆ ನಿಧರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಂತ್ಯಕ್ರಿಯೆಗಾಗಿ ಮಾಝ್ನನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಕರೆ ತರಲಾಗಿದೆ.
ಶಿವಮೊಗ್ಗ ಪೊಲೀಸರಿಂದ ಬಂಧಿತನಾಗಿದ್ದ ಶಂಕಿತ ಉಗ್ರ ಮಾಝ್ ತಂದೆ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಾಝ್ ಗೆ ಕೋರ್ಟ್ ಅವಕಾಶ ನೀಡಿದೆ. ಮಾಝ್ನನ್ನು ಬೆಳಿಗ್ಗೆ ಕರೆದುಕೊಂಡು ಹೋಗಿ ಸಂಜೆ 7 ಗಂಟೆಯೊಳಗೆ ವಾಪಸ್ ಕರೆದುಕೊಂಡು ಬರಲು ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮಾಝ್ನನ್ನು ತೀರ್ಥಹಳ್ಳಿಗೆ ಕರೆತರಲಾಗಿದೆ.
ಶಂಕಿತ ಉಗ್ರ ಮಾಝ್ ತಂದೆ ನಿಧನ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತೀರ್ಥಹಳ್ಳಿಯಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ಮಾಡಿದೆ. ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.
ಮಗನ ಬಂಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಮುನೀರ್ ಅಹಮದ್ ಶನಿವಾರ ಸಂಜೆ ಎದೆನೋವಿನ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮಾಝ್ ತಂದೆಗೆ 53 ವರ್ಷ ವಯಸ್ಸಾಗಿದ್ದು, ಮಗನ ಬಂಧನದ ಬಳಿಕ ಕುಗ್ಗಿಹೋಗಿದ್ದರು. ಹೀಗಾಗಿ ಅವರಿಗೆ ಹೃದಯಾಘಾತ ಉಂಟಾಗಿ ನಿಧನರಾಗಿದ್ದಾರೆ ಎನ್ನಲಾಗಿದೆ.