CrimeNational

ಅಕ್ರಮ ಹಣ ವರ್ಗಾವಣೆ ಪ್ರಕರಣ; ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ಗೆ ಜಾಮೀನು

ನವದೆಹಲಿ; ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ಗೆ ರಿಲೀಫ್‌ ಸಿಕ್ಕಿದೆ. ಸುಖೇಶ್‌ ಚಂದ್ರಶೇಖರ್‌ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ಗೆ ಮಧ್ಯಂತರ ಜಾಮೀನು ನೀಡಲಾಗಿದ್ದು, 50 ಸಾವಿರ ರೂಪಾಯಿ ಶ್ಯೂರಿಟಿ ನೀಡಲು ಸೂಚಿಸಲಾಗಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದರ್ ಮಲಿಕ್ ಅವರು ಜಾಮೀನು ಅರ್ಜಿಯ ಬಗ್ಗೆ ಇಡಿಯಿಂದ ಪ್ರತಿಕ್ರಿಯೆ ಕೇಳಿದರು. ಇಡಿ ಪ್ರತಿಕ್ರಿಯೆ ನೀಡುವವರೆಗೆ ಜಾಮೀನು ಅರ್ಜಿ ನ್ಯಾಯಾಲಯದಲ್ಲಿ ಬಾಕಿ ಇರಲಿದೆ.

200 ಕೋಟಿ ರೂಪಾಯಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಇಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರಾಗಿದ್ದರು. ಇತ್ತೀಚೆಗೆ, ಇಡಿ ಅಧಿಕಾರಿಗಳು ಪ್ರಕರಣದ ಎರಡನೇ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ್ದು, ಜಾಕ್ವೆಲಿನ್‌ ಅವರನ್ನು ಆರೋಪಿ ಎಂದು ಹೆಸರಿಸಿದ್ದರು. ಡಿಸೆಂಬರ್‌ನಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಇಡಿ ತನ್ನ ಮೊದಲ ಚಾರ್ಜ್ ಶೀಟ್ ಸಲ್ಲಿಸಿತ್ತು. ನಂತರ, ಫೆಬ್ರುವರಿಯಲ್ಲಿ ಚಂದ್ರಶೇಖರ್ ಅವರನ್ನು ಜಾಕ್ವೆಲಿನ್‌ ಫರ್ನಾಂಡಿಸ್‌ಗೆ ಪರಿಚಯಿಸಿದ್ದ ಪಿಂಕಿ ಇರಾನಿ ಎಂಬುವವರ ವಿರುದ್ಧವೂ ಪೂರಕ ಚಾರ್ಜ್‌ಶೀಟ್ ಸಲ್ಲಿಸಿತ್ತು.

Share Post