CrimeDistricts

ಹುಬ್ಬಳ್ಳಿಯಲ್ಲಿ PFI, SDPIನ ಹತ್ತು ಮುಖಂಡರ ಬಂಧನ

ಹುಬ್ಬಳ್ಳಿ ; ಇವತ್ತೂ ಕೂಡಾ ರಾಜ್ಯಾದ್ಯಂತ ಪಿಎಫ್‌ಐ ಹಾಗೂ ಎಸ್‌ಡಿಪಿಐ ಮುಖಂಡರ ಮನೆಗಳ ಮೇಲೆ ದಾಳಿ ಮುಂದುವರೆದಿದೆ. ಹಳೇ ಹುಬ್ಬಳ್ಳಿಯ ಕಸಬಾಪೇಟ್ ಮತ್ತು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೂಡಾ 10ಕ್ಕೂ ಹೆಚ್ಚು SDPI-PFI ಮುಖಂಡರನ್ನು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.‌

    ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ಜನರನ್ನು ಬಂಧಿಸಲಾಗಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಫಾರುಕ್, ಸಿಕಂದರ್​ ಮತ್ತು ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಅಬ್ಬಾಸಲಿ ಮಂಟಗಣಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಪಿಐ ರಮೇಶ್​ ಗೋಕಾಕ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಸಿಆರ್​ಪಿಸಿ 107, 151 ಅಡಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share Post