ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 7.80 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು; ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬೃಹತ್ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಿದ್ದು, ಆರೋಪಿಗಳಿಂದ ಬರೋಬ್ಬರಿ 7 ಕೋಟಿ 80 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ನಾಲ್ವರು ಮಹಿಳೆಯರು ಹಾಗೂ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ.
ಬಂಧಿತರಿಂದ 1 ಕೆಜಿ ಎಂಡಿಎಂಎ, 10 ಕೆಜಿ ಗಾಂಜಾ ಸೇರಿದಂತೆ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಜೂನ್ 24 ರಂದು ವಿವೇಕನಗರ ಪೊಲೀಸರು ಡಿಜೆ ಒಬ್ಬನನ್ನು ಬಂಧಿಸಿದ್ದರು. ನಂತರ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು, ಬೃಹತ್ ಜಾಲವನ್ನು ಪತ್ತೆ ಹಚ್ಚಿದ್ದಾರೆ. ಇವರಿಗೆ ಆಂಧ್ರಪ್ರದೇಶದ ಚಿಂತಪಲ್ಲಿಯಿಂದ ಡ್ರಗ್ಸ್ ಪೂರೈಕೆಯಾಗುತ್ತಿತ್ತು ಎಂದು ತಿಳಿದುಬಂದಿದೆ. ರೈಲಿನಲ್ಲಿ ಬಂದು ಇಲ್ಲಿ ಡ್ರಗ್ಸ್ ಮಾರಾಟ ಮಾಡಿಹೋಗುತ್ತಿದ್ದರು ಎಂದು ಹೇಳಲಾಗಿದೆ.