CrimeDistricts

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ; ಮತ್ತಿಬ್ಬರನ್ನು ಬಂಧಿಸಿದ ಸಿಐಡಿ

ಕಲಬುರಗಿ; ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಲು ಮತ್ತಿಬ್ಬರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಸಹಚರ, ಹಾಸ್ಟೆಲ್ ವಾರ್ಡನ್ ರಾವುತಪ್ಪ‌ ಬಸವಂತ್ರಾಯ ವಾಲೀಕಾರ (35) ಎಂಬಾತನನ್ನು ಗುರುವಾರ ಬಂಧಿಸಲಾಗಿದೆ. ನಗರದ ಜ್ಞಾನಜ್ಯೋತಿ ಇಂಗ್ಲಿಷ್ ‌ಮಾಧ್ಯಮ ಶಾಲೆಯ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ರಾವುತಪ್ಪ ಬ್ಲೂಟೂತ್ ಬಳಸಿ ಉತ್ತರ ಹೇಳುವ ಮೂಲಕ ಸಹಕರಿಸಿದ್ದ. ಅಷ್ಟೇ ಅಲ್ಲದೆ ಆರ್.ಡಿ. ಪಾಟೀಲ್‌ಗೆ ಗಿರಾಕಿಗಳನ್ನು ಹುಡುಕಿ ತರುತ್ತಿದ್ದ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ಎ.ಇ, ಜೆ.ಇ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಯೂ ಅಭ್ಯರ್ಥಿಗಳಿಗೆ ಅಕ್ರಮವಾಗಿ ಉತ್ತರಗಳನ್ನು ಹೇಳಿಸಿದ್ದ ಎಂದು ಗೊತ್ತಾಗಿದೆ. ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್ ವಾರ್ಡನ್ ಆಗಿ 2019ರಲ್ಲಿ ನೇಮಕವಾಗಿದ್ದ. ಪಿಎಸ್ಐ ಅಕ್ರಮ ಹೊರಬೀಳುತ್ತಿದ್ದಂತೆಯೇ ನಾಪತ್ತೆಯಾಗಿದ್ದ. ಹಾಸ್ಟೆಲ್ ಕರ್ತವ್ಯಕ್ಕೂ ಗೈರಾಗಿದ್ದ ಎಂದು ಮೂಲಗಳು ತಿಳಿಸಿವೆ. ಇದುವರೆಗೆ ಈ ಪ್ರಕರಣದಲ್ಲಿ 53 ಆರೋಪಿಗಳನ್ನು ಬಂಧಿಸಲಾಗಿದೆ.

Share Post