NationalPolitics

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ; ಜಿ-23 ನಾಯಕರ ಬೆಂಬಲ

ನವದೆಹಲಿ; ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುತ್ತಿದ್ದಾರೆ. ಇದು ಕನ್ಫರ್ಮ್‌ ಆಗುತ್ತಿದ್ದಂತೆ ಪಕ್ಷದ ಭಿನ್ನಮತೀಯ ಬಣ ‘ಜಿ23’ ನಾಯಕರ ಬೆಂಬಲವೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಗಲಾರಂಭಿಸಿದೆ. ಕಾಂಗ್ರೆಸ್‌ ಪಕ್ಷದ ಸಂಘಟನಾತ್ಮಕ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿ ಅವರಿಗೆ ‘ಜಿ23’ ಬಣ ಪತ್ರ ಬರೆದಿತ್ತು. ಅದರ ಸದಸ್ಯರಾದ ಮನೀಶ್ ತಿವಾರಿ ಮತ್ತು ಆನಂದ್ ಶರ್ಮಾ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

ಇತ್ತ ಈ ಬಣದಲ್ಲಿ ಸಂಸದ ಶಶಿ ತರೂರ್‌ ಅವರೂ ಇದ್ದರು. ಅವರೂ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಆದ್ರೆ ಅವರದ್ದೇ ತಂಡದ ಸದಸ್ಯರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸುವುದಾಗಿ ಹೇಳಿರುವುದು ಅಚ್ಚರಿ ಮೂಡಿಸಿದೆ. ಇನ್ನೊಂದೆಡೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡುತ್ತಿರುವುದರಿಂದ ದಿಗ್ವಿಜಯ್‌ ಸಿಂಗ್‌ ಅಖಾಡದಿಂದ ಹಿಂದೆ ಸರಿದಿದ್ದಾರೆ.

Share Post