CrimeInternationalSports

ಫುಟ್ಬಾಲ್‌ ಸ್ಟೇಡಿಯಂನಲ್ಲಿ ಕಾದಾಟ; 127 ಮಂದಿ ದಾರುಣ ಸಾವು

ಇಂಡೋನೇಷಿಯಾ; ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಫುಟ್ಬಾಲ್ ಪಂದ್ಯದ ವೇಳೆ ಎರಡೂ ತಂಡಗಳ ಅಭಿಮಾನಿಗಳ ಕಾದಾಟ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ 127 ಮಂದಿ ಸಾವಿಗೆ ಕಾರಣವಾಗಿದೆ. ಘಟನೆಯಲ್ಲಿ 180ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾರೆ.

ಇಂಡೋನೇಷ್ಯಾದ ಪೂರ್ವ ಜಾವಾದ ಕಂಜುರುಹಾನ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಬಿಆರ್​​ಐ ಲಿಗಾ 1 ಫುಟ್ಬಾಲ್ ಪಂದ್ಯದ ವೇಳೆ ಈ ಹಿಂಸಾಚಾರ ಸಂಭವಿಸಿದೆ. ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವೆ ಶನಿವಾರ ಪಂದ್ಯ ಇತ್ತು. ಇದರಲ್ಲಿ ಅರೆಮಾ ಎಫ್​ಸಿ ತಂಡ ಸೋತಿತ್ತು. ಇದರಿಂದ ರೊಚ್ಚಿಗೆದ್ದ ಸಾವಿರಾರು ಅಭಿಮಾನಿಗಳು ಪರಸ್ಪರ ಕಿತ್ತಾಡಿಕೊಂಡು, ಮೈದಾನಕ್ಕೂ ನುಗ್ಗಿ ದಾಂಧಲೆ ಎಬ್ಬಿಸಿದ್ದಾರೆ. ಇದನ್ನು ತಡೆಯಲು ಪೊಲೀಸರು ಅಶ್ರುವಾಯು, ರಬ್ಬರ್​ ಬುಲೆಟ್ ಸಿಡಿಸಿದ್ದಾರೆ. ಲಾಠಿ ಚಾರ್ಜ್​ ಮಾಡಿದ್ದಾರೆ.

ಅಭಿಮಾನಿಗಳ ಮಧ್ಯೆ ನಡೆದ ಹೊಡೆದಾಟದಲ್ಲಿ 127 ಜನರು ಮೃತಪಟ್ಟಿದ್ದು, ಇದರಲ್ಲಿ ಇಬ್ಬರು ಪೊಲೀಸರೂ ಇದ್ದಾರೆ. 34 ಜನರು ಕ್ರೀಡಾಂಗಣದಲ್ಲೇ ಕೊಲ್ಲಲ್ಪಟ್ಟರೆ, ಉಳಿದವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಉಸಿರು ಚೆಲ್ಲಿದ್ದಾರೆ. ಅಭಿಮಾನಿಗಳ ನಡುವಿನ ಹಿಂಸಾಚಾರ ತಡೆಯಲು ಪೊಲೀಸರು ಲಾಠಿ ಚಾರ್ಜ್​ ಮಾಡಿದರು ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

Share Post