CrimeDistricts

ಪ್ರಿಯಕರನೊಂದಿಗೆ ಮಗಳು ಪರಾರಿ; ಅಪ್ಪ, ಅಮ್ಮ, ಸಹೋದರ ಆತ್ಮಹತ್ಯೆ

ಚಿಕ್ಕಬಳ್ಳಾಪುರ; ಮಗಳು ಪ್ರಿಯಕರನೊಂದಿಗೆ ಓಡಿಹೋಗಿದ್ದರಿಂದ ಬೇಸತ್ತ ಪೋಷಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

  ಗ್ರಾಮದ ಅರ್ಚನಾ ಎಂಬಾಕೆ ಪ್ರಿಯಕರನೊಂದಿಗೆ ಓಡಿಹೋಗಿದ್ದಾಳೆ. ಇದರಿಂದ ಬೇಸತ್ತ ಅರ್ಚನಾ ತಂದೆ ಶ್ರೀರಾಮಪ್ಪ, ತಾಯಿ ಸರೋಜಮ್ಮ ಹಾಗೂ ಸಹೋದರ ಮನೋಜ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post