CrimeDistricts

2017ರ ಪರೇಶ್‌ ಮೇಸ್ತಾ ಸಾವು ಪ್ರಕರಣ; ಆಕಸ್ಮಿಕ ಸಾವು ಎಂದ ಸಿಬಿಐ

ಕಾರವಾರ; 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ನಡೆದ ಪರೇಶ್‌ ಮೇಸ್ತಾ ಎಂಬಾತನ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಸಿಬಿಐ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಇದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ಅಧಿಕಾರಿಗಳು ಹೊನ್ನಾವರದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.  ನ್ಯಾಯಾಲಯ ನವೆಂಬರ್ 16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆ ವೇಳೆ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. 2017ರ ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತಾ ಮೃತದೇಹ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಈತನನ್ನು ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದವು. ಇದು ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.
Share Post