NationalPolitics

ಟಿಆರ್ ಎಸ್ ಈಗ ಭಾರತ್ ರಾಷ್ಟ್ರ ಸಮಿತಿ

ಹೈದರಾಬಾದ್(ತೆಲಂಗಾಣ):ರಾಷ್ಟ್ರ ರಾಜಕಾರಣ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ​ರಾವ್​ ಅವರು ತಮ್ಮ ಹೊಸ ರಾಷ್ಟ್ರೀಯ ಪಕ್ಷದ ಹೆಸರು ಘೋಷಿಸಿದರು. ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್​ಎಸ್)​ ಎಂದಿದ್ದ ಅವರ ಪಕ್ಷಕ್ಕೆ ಭಾರತ್ ರಾಷ್ಟ್ರ ಸಮಿತಿ(ಬಿಆರ್​ಎಸ್​) ಎಂದು ಮರುನಾಮಕರಣ ಮಾಡಿದ್ದಾರೆ.

ಇಂದು ಮಧ್ಯಾಹ್ನ ನಡೆಯುವ ಸಭೆಯಲ್ಲಿ ಪಕ್ಷದ ಹೆಸರನ್ನು ಪ್ರಸ್ತಾಪಿಸಿ ಅನುಮೋದನೆ ಪಡೆಯಲಿದ್ದಾರೆ. ಸಭೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್​.ಡಿ. ಕುಮಾರಸ್ವಾಮಿ, ತಮಿಳುನಾಡು ವಿಸಿಕೆ ಪಕ್ಷದ ಅಧ್ಯಕ್ಷ, ಸಂಸದ ತಿರುಮಾವಲವನ್ ಮತ್ತಿತರರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ

Share Post