CrimeInternational

ಮಕ್ಕಳ ಆರೈಕೆ ಕೇಂದ್ರದಲ್ಲಿ ಗುಂಡಿನ ದಾಳಿ; 30ಕ್ಕೂ ಹೆಚ್ಚು ಮಂದಿ ಹತ್ಯೆ

ಬ್ಯಾಂಕಾಕ್; ಥಾಯ್ಲೆಂಡ್‌ನ ಮಕ್ಕಳ ಆರೈಕೆ ಕೇಂದ್ರದಲ್ಲಿ ಗುಂಡಿನ ದಾಳಿ ನಡೆದಿದ್ದು, 30 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲಾಗಿದೆ. ಅದರಲ್ಲಿ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 23 ಮಕ್ಕಳು, ಇಬ್ಬರು ಶಿಕ್ಷಕರು ಮತ್ತು ಒಬ್ಬ ಪೊಲೀಸ್ ಮೃತಪಟ್ಟಿರುವುದು ಈವರೆಗೆ ದೃಢಪಟ್ಟಿದೆ

ನೊಂಗ್ಬುವಾ ಲಂಫೂ ಪಟ್ಟಣದಲ್ಲಿ ಈ ಕೃತ್ಯ ಎಸಗಲಾಗಿದೆ. ಮಧ್ಯಾಹ್ನ ಆರೈಕೆ ಕೇಂದ್ರಕ್ಕೆ ನುಗ್ಗಿದ ಬಂದೂಕುಧಾರಿ ವ್ಯಕ್ತಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ್ದಾನೆ ಎಂದು ಪೊಲಿಸ್ ಮೇಜರ್ ಜನರಲ್ ಅಚಯೊನ್ ಕ್ರೈಥಾಂಗ್ ತಿಳಿಸಿದ್ದಾರೆ. ದಾಳಿಯ ನಂತರ ಬಂದೂಕುಧಾರಿ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

Share Post