ನ್ಯಾಷನಲ್ ಹೆರಾಲ್ಡ್ ಕೇಸ್; ಇಡಿ ವಿಚಾರಣೆಗೆ ಹಾಜರಾದ ಡಿ.ಕೆ.ಶಿವಕುಮಾರ್
ನವದೆಹಲಿ; ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಯಂಗ್ ಇಂಡಿಯನ್ ಸಂಸ್ಥೆಗೆ ಹಣ ದೇಣಿಗೆ ನೀಡಿದ್ದ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಅವರ ಸಹೋದರ ಡಿ.ಕೆ.ಸುರೇಶ್ ಅವರನ್ನು ಕೂಡಾ ವಿಚಾರಣೆ ನಡೆಸಲಾಗುತ್ತಿದೆ.
ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇ.ಡಿ ಕಚೇರಿಗೆ ತೆರಳುವ ಮುನ್ನ, ಡಿ.ಕೆ.ಶಿವಕುಮಾರ್ ಮಾತನಾಡಿದರು. ನಾನು ಕಾನೂನನ್ನು ಗೌರವಿಸುವ ನಾಗರಿಕ. ಸದ್ಯ, ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯ ಹೊಣೆ ಹೊತ್ತಿರುವ ಶಿವಕುಮಾರ್, ಗುರುವಾರ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು.
ಕಳೆದ ಸೆಪ್ಟೆಂಬರ್ 19ರಂದು ಇ.ಡಿ ಮುಂದೆ ಡಿಕೆಶಿ ವಿಚಾರಣೆಗೆ ಹಾಜರಾಗಿದ್ದರು. ಆ ಸಂದರ್ಭದಲ್ಲಿ ಹಣ ಅಕ್ರಮ ವರ್ಗಾವಣೆ ಕುರಿತ ಮತ್ತೊಂದು ಪ್ರಕರಣದ ಕುರಿತು ವಿಚಾರಣೆ ನಡೆಸಲಾಗಿತ್ತು. ಇದೀಗ ನ್ಯಾಷನಲ್ ಹೆರಾಲ್ಡ್ ಕೇಸ್ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ. ಇದೇ ಪ್ರಕರಣದಲ್ಲಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪವನ್ ಬನ್ಸಾಲ್ ಸೇರಿದಂತೆ ಹಲವು ನಾಯಕರನ್ನು ಈ ಹಿಂದೆ ಇಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು.