ಚಿತ್ರದುರ್ಗದ ಹಿರಿಯೂರಿನಲ್ಲಿ ಭಾರತ್ ಜೋಡೋ ಯಾತ್ರೆ
ಚಿತ್ರದುರ್ಗ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ 12ನೇ ದಿನಕ್ಕೆ ಕಾಲಿಟ್ಟಿದೆ. ಇವತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಿಂದ ಯಾತ್ರೆ ಶುರುವಾಯಿತು.
ಹಿರಿಯೂರು ನಗರಕ್ಕೆ ಯಾತ್ರೆ ಆಗಮಿಸುತ್ತಿದ್ದಂತೆ ಲಂಬಾಣಿ ಮಹಿಳೆಯರು ಪೂರ್ಣಕುಂಭದೊಂದಿಗೆ ರಾಹುಲ್ ಗಾಂಧಿಯವರಿಗೆ ಸ್ವಾಗತ ಕೋರಿದರು. ಟಿ.ಬಿ ಸರ್ಕಲ್ನಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ರಾಹುಲ್ ಗಾಂಧಿ ಮಾಲಾರ್ಪಣೆ ಮಾಡಲು ಬಂದಿದ್ದರು. ಆದರೆ ಸಾವಿರಾರು ಜನ ಸೇರಿದ್ದರಿಂದ ಮಾಲಾರ್ಪಣೆ ಮಾಡಲು ಸಾಧ್ಯವಾಗಲಿಲ್ಲ. ಇಂದು ಬೆಳಗ್ಗೆ ಪಾದಯಾತ್ರೆ ಆರಂಭವಾಗುತ್ತಿದ್ದಂತೆ ಜಿಟಿ ಜಿಟಿ ಮಳೆ ಶುರುವಾಗಿತ್ತು. ಆದರೆ ಮಳೆಯನ್ನೂ ಲೆಕ್ಕಿಸದೆ ನಿನ್ನೆಯಂತೆಯೇ ರಾಹುಲ್ ಗಾಂಧಿ ಹೆಜ್ಜೆ ಹಾಕಿದರು. ಇಂದು ಸಂಜೆ ಹಿರಿಯೂರಿನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಹರ್ತಿಕೋಟೆ ಗ್ರಾಮದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ.