CrimeNational

ಜಾತಿ ಪ್ರಮಾಣ ಪತ್ರ ಸಿಗದಿದ್ದಕ್ಕೆ ಬೇಸರ; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಚೆನ್ನೈ; ಮಗನಿಗೆ ಜಾತಿ ಪ್ರಮಾಣ ಪತ್ರ ಕೊಡಿಸಲಾಗದೆ ಒದ್ದಾಡುತ್ತಿದ್ದ ವ್ಯಕ್ತಿಯೊಬ್ಬ ಕೋರ್ಟ್‌ ನಲ್ಲಿತೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನ ಮದ್ರಾಸ್‌ ಹೈಕೋರ್ಟ್‌ನಲ್ಲಿ ನಡೆದಿದೆ.

ಕಾಂಚೀಪುರಂನ ವೇಲು ಮುರುಗನ್‌ (49) ಅವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.  ‘ಮಲೈಕುರವರ್’ ಎಂಬ ಪರಿಶಿಷ್ಟ ಪಂಗಡಕ್ಕೆ ವೇಲು ಮುರುಗನ್‌ ಸೇರಿದ್ದಾರೆ. ಹೀಗಾಗಿ ಅವರು ಜಾತಿ ಪ್ರಮಾಣ ಪತ್ರ ಪಡೆಯಲು ಓಡಾಡುತ್ತಿದ್ದರು. ಆದ್ರೆ ಅದು ಸಾಧ್ಯವಾಗಿಲ್ಲ. ಹೀಗಾಗಿ ಮನನೊಂದು ಬೆಂಕಿ ಹಚ್ಚಿಕೊಂಡಿದ್ದಾರೆ.

ಶೇ.೯೫ರಷ್ಟು ಸುಟ್ಟು ಗಾಯಗಳಾಗಿದ್ದ ವೇಲು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.

Share Post