ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ..?; ಸೂಚನೆ ಕೊಟ್ರಾ ಹೆಚ್ಡಿಕೆ..?
ಮೈಸೂರು; ನಿನ್ನೆಯಷ್ಟೇ ಮೈಸೂರಿನಲ್ಲಿ ಮಾತನಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ನವೆಂಬರ್ 1ರಂದು 126 ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಈಗ ಆ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರೂ ಇರಬಹಬುದು ಎಂದು ಹೇಳುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಇಂದು ಅವರು ಮೈಸೂರಿನ ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅನಂತರ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿಯವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದರು.
ಜೆಡಿಎಸ್‌ನ ಸಂಭವನೀಯ ಅಭ್ಯರ್ಥಿಗಳು, ಹಾಲಿ ಹಾಗೂ ಮಾಜಿ ಶಾಸಕರ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ಚಾಮುಂಡೇಶ್ವರಿಯಲ್ಲಿ ಬೇಡಿಕೊಂಡಿದ್ದೇವೆ. ತಾಯಿಯ ಆಶೀರ್ವಾದದಿಂದ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೆಚ್ಡಿಕೆ ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಸರ್ಕಾರ ಬಂದರೆ ಗುಣಮಟ್ಟದ ಶಿಕ್ಷಣ, ಆರೋಗ್ಯ, ರೈತರು ಸ್ವಾಲಬವಂಬಿಗಳಾಗಲು ಯೋಜನೆ, ಪ್ರತಿಯೊಬ್ಬರಿಗೂ ಮನೆ ಮತ್ತು ನೀರಾವರಿ ಸೇರಿ ಪಂಚರತ್ನ ಯೋಜನೆ ಜಾರಿ ಮಾಡ್ತೀವಿ. ಒಂದ್ವೇಳೆ ಪಂಚರತ್ನ ಯೋಜನೆ ಅನುಷ್ಠಾನಗೊಳಿಸದಿದ್ರೆ ಪಕ್ಷವನ್ನ ವಿಸರ್ಜನೆ ಮಾಡ್ತೇನೆ ಎಂದು ಹೆಚ್ಡಿಕೆ ಇದೇ ವೇಳೆ ತಿಳಿಸಿದರು.