ಸುಗ್ರೀವಾಜ್ಞೆ ಮೂಲಕ ಎಸ್ಟಿ/ಎಸ್ಟಿ ಮೀಸಲಾತಿ ಹೆಚ್ಚಳ; ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು; ಎಸ್ಸಿ/ಎಸ್ಟಿ ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ಹೆಚ್ಚಿಸಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಈ ವಿಚಾರವನ್ನು ತಿಳಿಸಿದರು.
ಎಸ್ಸಿ/ಎಸ್ಟಿ ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧರಿಸಿದ್ದೇವೆ. ಸಂಪುಟದಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದೆ. ಸುಂಪುಟ ಸಭೆಯ ತೀರ್ಮಾನವನ್ನು ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.