CrimeDistricts

ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ ಸರ್ಕಾರಿ ಬಸ್‌; 22 ಮಂದಿಗೆ ಗಾಯ..!

ಚಾಮರಾಜನಗರ; ಹನೂರು ತಾಲ್ಲೂಕಿನ ತಾಳಬೆಟ್ಟ ಬಳಿ ಸರ್ಕಾರಿ ಬಸ್‌ ಅಪಘಾತಕ್ಕೀಡಾಗಿದೆ. ಮಹದೇಶ್ವರ ಬೆಟ್ಟದಿಂದ ಪ್ರಯಾಣಿಕರನ್ನು ತುಂಬಿಸಿಕೊಂಡು ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ತಾಳಬೆಟ್ಟ ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಇದ್ರಿಂದಾಗಿ ಬಸ್‌ ಹಳ್ಳಕ್ಕೆ ನುಗ್ಗಿದ್ದು, ಘಟನೆಯಲ್ಲಿ 22 ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕೊಳ್ಳೆಗಾಲ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬಸ್‌ನಲ್ಲಿ 51 ಮಂದಿ ಪ್ರಯಾಣಿಸುತ್ತಿದ್ದರು. ಇದ್ರಲ್ಲಿ 22 ಮಂದಿಗೆ ಗಾಯಗಳಾಗಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ತೀವ್ರವಾಗಿ ಗಾಯಗೊಂಡವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಾವಳಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಕಾರ್ಯಕ್ರಮವಿತ್ತು. ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಬೆಳಗ್ಗೆ ಬಸ್‌ನಲ್ಲಿ ತಮ್ಮ ಊರುಗಳಿಗೆ ತೆರಳುತ್ತಿದ್ದರು, ಈ ವೇಳೆ ಈ ಅಪಘಾತ ಸಂಭವಿಸಿದೆ.

Share Post