BengaluruCrimeDistricts

ನೆಟ್ಟಾರು ಕೊಲೆ ಆರೋಪಿಗಳ ಸುಳಿವು ನೀಡಿದರೆ ನಗದು ಬಹುಮಾನ

ಮಂಗಳೂರು; ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ನಾಲ್ವರು ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ಅವರ ಸುಳಿವು ನೀಡಿದವರಿಗೆ ಎನ್‌ಐಎ ನಗದು ಬಹುಮಾನ ಘೋಷಣೆ ಮಾಡಿದೆ. ಆರೋಪಿಗಳ ಮಾಹಿತಿ ನೀಡಿದವರಿಗೆ ತಲಾ 2 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಎನ್‌ಐಎ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟವರಿಗೆ ಒಟ್ಟು 14 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಎನ್‌ಐಎ ಹೇಳಿದೆ. ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ ತಲಾ 5 ಲಕ್ಷ ರೂಪಾಯಿ, ಇನ್ನುಳಿದ ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದ್ರೆ ತಲಾ 2 ಲಕ್ಷ ಬಹುಮಾನ ರೂಪಾಯಿ ನಗದು ನೀಡಲಾಗುತ್ತದೆ.

ಪ್ರವೀನ್‌ ನೆಟ್ಟಾರು ಅವರನ್ನು ಜುಲೈ 26ರಂದು ಬೆಳ್ಳಾರೆಯಲ್ಲಿ ಕೊಲೆ ಮಾಡಲಾಗಿತ್ತು. ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು.

Share Post