CrimeDistricts

ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಗೂ ಹೃದಯಾಘಾತ

ಹುಬ್ಬಳ್ಳಿ; ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಯೂ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪ ಗ್ರಾಮದಲ್ಲಿ ನಡೆದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಪುತ್ರಪ್ಪ ನೆಲಗುಡ್ಡ ಸಾವನ್ನಪ್ಪಿದ್ದರು. ಅವರ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಪತ್ನಿ ಬಸಮ್ಮ ಕೂಡಾ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಹೀಗಾಗಿ ಕುಟುಂಬದವರು ಅಕ್ಕ-ಪಕ್ಕದಲ್ಲೇ ದಂತಿಯ ಅಂತ್ಯಕ್ರಿಯೆ ನಡೆಸಿದ್ದಾರೆ.

Share Post