ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ; ಮೊದಲ ರ್ಯಾಂಕ್ ಪಡೆದಿದ್ದ ಸುಪ್ರಿಯಾ ಅರೆಸ್ಟ್
ಕಲಬುರ್ಗಿ; ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ ಸಂಬಂಧ ಮತ್ತೊಬ್ಬರು ಆರೋಪಿಯನ್ನು ಬಂಧಿಸಲಾಗಿದೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಸುಪ್ತಿಯಾ ಹುಂಡೇಕರ್ ಅವರನ್ನು ಸಿಐಡಿ ಪೊಲೀಸರು ಕಲಬುರ್ಗಿಯಲ್ಲಿ ಬಂಧಿಸಿದ್ದಾರೆ.
ಕಲಬುರ್ಗಿ ಜಿಲ್ಲೆ ಜೇವರ್ಗಿ ಬಳಿಯ ಹಿಪ್ಪರಗಾ ಗ್ರಾಮದ ಸುಪ್ರಿಯಾ ಹುಂಡೇಕರ್ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದಾರೆಂದು ಹೇಳಲಾಗಿದೆ. ಹೀಗಾಗಿ ಅವರನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಗಾಗಿ ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಇನ್ನು ಸುಪ್ರಿಯಾ ವಿಚಾರಣೆ ಬಳಿಕ ಇನ್ನಷ್ಟು ಅಕ್ರಮಗಳು ಬಯಲಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.