CrimeDistricts

ಬಂಡೇಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ; ಆರೋಪಿಗಳಿಗೆ ನ.15ರವರೆಗೆ ನ್ಯಾಯಾಂಗ ಬಂಧನ

ರಾಮನಗರ; ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರೂ ಆರೋಪಿಗಳಿಗೆ ನವೆಂಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಮೂವರನ್ನು ಇಂದು ಮಾಗಡಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಮೂವರಿಗೂ 15ರವೆರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಒಂದನೇ ಹೆಚ್ಚುವರಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಈ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಎ1 ಆರೋಪಿ ಕಣ್ಣೂರು ಮಠದ ಡಾ. ಮೃತ್ಯುಂಜಯಶ್ರೀ, ಎ3 ಆರೋಪಿ ಮಹದೇವಯ್ಯರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿಡಲಾಗಿದೆ. ಎರಡನೇ ಆರೋಪಿ ನೀಲಾಂಬಿಕೆಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

Share Post