CrimeInternational

ರಷ್ಯಾದ ಕೆಫೆಯಲ್ಲಿ ಬೆಂಕಿ ದುರಂತ; 13 ಮಂದಿ ದುರ್ಮರಣ

ಮಾಸ್ಕೋ; ರಷ್ಯಾದ ಕೊಸ್ಟ್ರೋಮಾ ನಗರದಲ್ಲಿ ಭಾರಿ ಬೆಂಕಿ ದುರಂತ ಸಂಭವಿಸಿದೆ. ಕೆಫೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅವಘಡದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಕೆಫೆಯಲ್ಲಿದ್ದ 250ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದ್ದು, ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.

ಶುಕ್ರವಾರ ರಾತ್ರಿ ಈ ದುರಂತ ನಡೆದಿದೆ. ಮಾಸ್ಕೋದಿಂದ ಸುಮಾರು 300 ಕಿಲೋಮೀಟರ್ ದೂರದಲ್ಲಿರುವ ಕೊಸ್ಟ್ರೋಮಾದಲ್ಲಿ ಈ ಘಟನೆ ನಡೆದಿದ್ದು, ಬಹುಬೇಗ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

Share Post