CrimeDistricts

ಮತ್ತು ಬರುವ ಔಷಧಿ ಬೆರೆಸಿದ ಸೇಬು ನೀಡಿ ಅತ್ಯಾಚಾರ; ಶಿವಮೂರ್ತಿ ಶರಣರ ವಿರುದ್ಧ ಚಾರ್ಜ್‌ಶೀಟ್‌

ಚಿತ್ರದುರ್ಗ; ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕೇಸ್‌ ಸಂಬಂಧ ಪೊಲೀಸರು ಚಾರ್ಜ್‌ ಶೀಟ್‌ ಸಲ್ಲಿಸಿದ್ದಾರೆ. ಶಿವಮೂರ್ತಿ ಮುರುಘಾ ಶರಣರು ಲೇಡಿ ವಾರ್ಡನ್‌ ಮೂಲಕ ವಿದ್ಯಾರ್ಥಿನಿಯರನ್ನು ಅವರ ಕೊಠಡಿಗೆ ಕರೆಸಿಕೊಳ್ಳುತ್ತಿದ್ದರು. ಮತ್ತು ಬರುವ ಔಷಧಿ ಬೆರೆಸಿದ ಸೇಬು ನೀಡಿ ಮಕ್ಕಳನ್ನು ಅತ್ಯಾಚಾರ ಬಳಸಿಕೊಳ್ಳುತ್ತಿದ್ದರೆಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಮಕ್ಕಳನ್ನು ಕಚೇರಿ, ಬೆಡ್ ರೂಂ, ಬಾತ್ ರೂಂಗೆ ಕರೆದೊಯ್ದು ಶಿವಮೂರ್ತಿಯವರು ಬಲಾತ್ಕಾರ ಮಾಡಿದ್ದಾರಂತೆ. ಅದನ್ನು ವಿರೋಧಿಸಿದರೆ ಜೀವ ಬೆದರಿಕೆ ಹಾಕುತ್ತಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಹೇಳಲಾಗಿದೆ. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ ಆರೋಪವಿದೆ.

ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲಿ ಶಿವಮೂರ್ತಿ ವಿರುದ್ಧ ಕೇಸ್‌ ದಾಖಲಾಗಿದ್ದು, ಈ ಸಂಬಂಧ 342 ಪುಟಗಳ 2 ಸೆಟ್‌ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ನ್ನು ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ.

Share Post