ನಾನಿನ್ನೂ ಸತ್ತಿಲ್ಲ ಎನ್ನುತ್ತಾ ಕಣ್ಣಲ್ಲಿ ನೀರು ತುಂಬಿಕೊಂಡ ಸಮಂತಾ
ಮುಂಬೈ; ಆರೋಗ್ಯ ಹೇಗಿದೆ ಎಂದು ಪ್ರಶ್ನಿಸಿದ್ದಕ್ಕೆ ನಟಿ ಸಮಂತಾ ನಾನಿನ್ನೂ ಸತ್ತಿಲ್ಲ ಎಂದು ಕಣ್ಣೀರಿಟ್ಟಿರುವ ಘಟನೆ ನಡೆದಿದೆ. ಸಮಂತಾ ಅವರು ಯಶೋಧಾ ಚಿತ್ರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಭಾಗವಾಗಿ ನಡೆದ ಸಂದರ್ಶನವೊಂದರಲ್ಲಿ ನಿರೂಪಕಿ ಆರೋಗ್ಯದ ಬಗ್ಗೆ ಕೇಳಿದಾಗ, ಸಮಂತಾ ಕಣ್ಣೀರು ಹಾಕಿದ್ದಾರೆ.
ಸಮಂತಾ ಮೈಯೋಸಿಟಿಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರ ನಡುವೆಯೂ ಸಮಂತಾ ಚಿತ್ರದ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಸದ್ಯಕ್ಕೆ ನಾನು ತುಂಬಾ ಚೆನ್ನಾಗಿ ಇದ್ದೇನೆ. ನನ್ನ ಆರೋಗ್ಯದ ಬಗ್ಗೆ ಹಲವಾರು ರೀತಿಯಲ್ಲಿ ಸುದ್ದಿಗಳು ಪ್ರಚಾರ ಪಡೆದುಕೊಳ್ಳುತ್ತಿವೆ. ಆದ್ರೆ ನಾನಿನ್ನೂ ಸತ್ತಿಲ್ಲ ಎಂದು ಕಣ್ಣಲ್ಲಿ ನೀರು ತುಂಬಿಕೊಂಡಿದ್ದಾರೆ.