Bengaluru

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ; ಬಿಗಿ ಪೊಲೀಸ್‌ ಭದ್ರತೆ

ಬೆಂಗಳೂರು; ಕೇಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್‌ 2 ಉದ್ಘಾಟನೆ, ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ಸಿಎಂ ಬೊಮ್ಮಾಯಿ, ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಸ್ವಾಗತ ಮಾಡಿದ್ದಾರೆ. ಮೊದಲಿಗೆ ಪ್ರಧಾನಿಯವರು ಕನಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಅನಂತರ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಲಿದ್ದಾರೆ.

ಮೋದಿ ಇಂದು ಪಾಲ್ಗೊಳ್ಳುವ ಕಾರ್ಯಕ್ರಮ

೧. ಬೆಳಗ್ಗೆ 9:45 – ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ
೨. ಬೆಳಗ್ಗೆ 10:20 – ಮೆಜೆಸ್ಟಿಕ್‍ನ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮನ
೩. ಬೆಳಗ್ಗೆ 10:40 – ವಂದೇಭಾರತ್ ರೈಲಿಗೆ ಹಸಿರು ನಿಶಾನೆ
೪. ಬೆಳಗ್ಗೆ 10:45 – ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ
೫. ಬೆಳಗ್ಗೆ 11:20 – ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮನ
೬. ಬೆಳಗ್ಗೆ 11:30 – ವಿಮಾನ ನಿಲ್ದಾಣದಲ್ಲಿರುವ ಟರ್ಮಿನಲ್-2 ಉದ್ಘಾಟನೆ
೭. ಮಧ್ಯಾಹ್ನ 12:00 – ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ
೮. ಮಧ್ಯಾಹ್ನ 12:30 – ಸಾರ್ವಜನಿಕ ಸಭೆ

Share Post