ಸುಪ್ರೀಂ ಸಿಜೆ ಚಂದ್ರಚೂಡ್ ಆಯ್ಕೆ ಪ್ರಶ್ನಿಸಿದ್ದ ವ್ಯಕ್ತಿಗೆ 1 ಲಕ್ಷ ದಂಡ
ನವದೆಹಲಿ; ಸುಪ್ರೀಂಕೋರ್ಟ್ ಸಿಜೆಐ ಆಗಿ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಆಯ್ಕೆಯನ್ನು ಪ್ರಶ್ನಿಸಿದ್ದ ಪಿಐಎಲ್ನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ. ಜೊತೆಗೆ ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.
ಗ್ರಾಮ ಉದಯ್ ಫೌಂಡೇಶನ್ ಎಂಬ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಸಂಜೀವ್ ಕುಮಾರ್ ತಿವಾರಿ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್, ಇದೊಂದು ಪ್ರಚಾರ ಹಿತಾಸಕ್ತಿಯ ದಾವೆ ಎಂದು ಅಭಿಪ್ರಾಯ ಪಟ್ಟಿದೆ. ಯಾವುದೇ ವಸ್ತು, ವಿಷಯವಿಲ್ಲದ ಈ ಅರ್ಜಿಯನ್ನು ಕೇವಲ ಪ್ರಚಾರ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಪೀಠ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್ ಪೀಠ, ಕೋರ್ಟ್ ಸಮಯ ವ್ಯರ್ಥ ಮಾಡಿದ್ದಕ್ಕೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.