ರಾಜೀವ್ ಗಾಂಧಿ ಹಂತಕರು ಇಂದು ಜೈಲಿನಿಂದ ರಿಲೀಸ್
ಚೆನ್ನೈ; ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳ 31 ವರ್ಷಗಳ ಜೈಲುವಾಸ ಅಂತ್ಯವಾಗಿದೆ. ಇಂದು ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ನಿನ್ನೆ ಸುಪ್ರೀಂ ಕೋರ್ಟ್ ಅಪರಾಧಿಗಳ ಬಿಡುಗಡೆಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರನ್ನು ಬಿಡುಗಡೆ ಮಾಡಲಾಗಿದೆ.
ಅಪರಾಧಿಗಳಾದ ನಳಿನಿ ಶ್ರೀಹರನ್, ಅವರ ಪತಿ ಮುರುಗನ್ ಮತ್ತು ಸಂತನ್ ಇಂದು ಸಂಜೆ ಜೈಲಿನಿಂದ ರಿಲೀಸ್ ಆಗಿದ್ದಾರೆ. 31 ವರ್ಷಗಳ ನಂತರ ಇವರು ಹೊರ ಪ್ರಪಂಚ ನೋಡಿದ್ದಾರೆ. ಮೇ ತಿಂಗಳಲ್ಲಿ, ಪ್ರಕರಣದ 7ನೇ ಅಪರಾಧಿ ಪೆರಾರಿವಾಲನ್‌ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಅದೇ ಆದೇಶ ಉಳಿದ ಅಪರಾಧಿಗಳಿಗೂ ಅನ್ವಯಿಸುತ್ತೆ ಎಂದು ಸುಪ್ರೀಂ ಕೋರ್ಟ್ ನಿನ್ನೆ ಆದೇಶ ಮಾಡಿತ್ತು.