ಹಾಲಿನ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ; ಸಿಎಂ ಹೇಳಿದ್ದೇನು..?
ಬೆಂಗಳೂರು; ಹಾಲು ಹಾಗೂ ಮೊಸರಿನ ದರ ಲೀಟರ್ಗೆ ಮೂರು ರೂಪಾಯಿ ಏರಿಸಿ ಕೆಎಂಎಫ್ ನಿರ್ಧಾರ ತೆಗೆದುಕೊಂಡಿತ್ತು. ಮಂಗಳವಾರದಿಂದಲೇ ಹೊಸ ದರ ಜಾರಿಯಾಗಬೇಕಿತ್ತು. ಆದ್ರೆ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಾತ್ಕಾಲಿಕ ತಡೆ ನೀಡಿದ್ದಾರೆ. ಕೆಎಂಎಫ್ ಅಧ್ಯಕ್ಷರ ಜೊತೆ ಮಾತನಾಡಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಮಧ್ಯಾಹ್ನ ನಂದಿನಿ ಹಾಲು ಹಾಗೂ ಮೊಸರಿನ ದರ ಏರಿಕೆ ಮಾಡಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಆದೇಶ ಮಾಡಿದ್ದರು. ಆದ್ರೆ ಕಲಬುರಗಿ ಪ್ರವಾಸದಲ್ಲಿದ್ದ ಸಿಎಂ ಬೊಮ್ಮಾಯಿ ಈ ಆದೇಶಕ್ಕೆ ತಡೆ ನೀಡಿದ್ದಾರೆ. ನವೆಂಬರ್ 20 ರಂದು ಕೆಎಂಎಫ್ ಅಧ್ಯಕ್ಷರ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡೋದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ ಮೊಬೈಲ್ ಮೂಲಕ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜೊತೆ ಮಾತನಾಡಿದ್ದಾರೆ.