CrimeNational

ಅಫ್ತಾಬ್‌ಗೆ 5 ದಿನ ಪೊಲೀಸ್‌ ಕಸ್ಟಡಿ; ಆರೋಪಿಯ ಮಂಪರು ಪರೀಕ್ಷೆಗೆ ಅಸ್ತು

ನವದೆಹಲಿ; ಶ್ರದ್ಧಾ ಕೊಲೆ ಪ್ರಕರಣದ ಆರೋಪಿ ಅಫ್ತಾಬ್‌ ಅಮೀನ್‌ ಪೂಲಾವಾಲಾನನ್ನು ದೆಹಲಿ ನ್ಯಾಯಾಲಯ ಐದು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ಮಹರೌಲಿ ನಗರ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಲಿದ್ದಾರೆ. ಆರೋಪಿಯ ಮಂಪರು ಪರೀಕ್ಷೆಗೂ ಕೋರ್ಟ್‌ ಅನುಮತಿ ನೀಡಿದೆ.

ಪೊಲೀಸರು ಆರೋಪಿಯ ಮಂಪರು ಪರೀಕ್ಷೆ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಅವಿರಲ್‌ ಶುಕ್ಲಾ ಅವರು, ಮಂಪರು ಪರೀಕ್ಷೆಗೆ ಅವಕಾಶ ನೀಡಿದ್ದಾರೆ. ಇತ್ತ ಅಫ್ತಾಬ್‌ಗೆ ಮರಣ ದಂಡನೆ ವಿಧಿಸುವಂತೆ ಒತ್ತಾಯಿಸಿ ಸಾಕೇತ್‌ ಜಿಲ್ಲಾ ನ್ಯಾಯಾಲಯಗಳ ವಕೀಲರು ಪ್ರತಿಭಟನೆ ನಡೆಸಿದರು.

Share Post