CinemaCrime

ಪಾಕಿಸ್ತಾನದ ಪರ ಘೋಷಣೆ; ವಿದ್ಯಾರ್ಥಿ ಪರ ನಿಂತ ನಟ ಚೇತನ್

ಬೆಂಗಳೂರು; ಇಲ್ಲಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದಕ್ಕೆ ಕಾರಣರಾಗಿದ್ದ ಕಾರಣಕ್ಕಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಕೂಡಾ ನಡೆದಿತ್ತು. ಇದೀಗ ಸದಾ ವಿವಾದದ ಮೂಲಕ ಸುದ್ದಿಯಲ್ಲಿರುವ ನಟ ಚೇತನ್‌ ಈ ವಿದ್ಯಾರ್ಥಿಗಳ ಪರ ನಿಂತು ಮತ್ತೆ  ಸುದ್ದಿಯಾಗಿದ್ದಾರೆ.

ಈ ಕುರಿತು ನಟ ಚೇತನ್ ಟ್ವಿಟ್ ಮಾಡಿದ್ದಾರೆ.

‘ನಿನ್ನೆ ನಡೆದ ಕಾಲೇಜು ಫೇಸ್ಟ್ ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕಾಗಿ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಿಸಿ ಮತ್ತು ಪೊಲೀಸ್ ಕಸ್ಟಡಿಗೆ ತಗೆದುಕೊಳ್ಳಲಾಗಿದೆ. ಇದು ಅಸಂಬಂಧ ಮತ್ತು ಅಪಾಯಕಾರಿ’

ಹೀಗಂತ ಚೇತನ್‌ ಟ್ವೀಟ್‌ ಮಾಡಿದ್ದಾರೆ. ಅಷ್ಟೇ ಅಲ್ಲದೆ ಪಾಕಿಸ್ತಾನದ ಜನರು ನಮ್ಮ ಸಹೋದರ ಸಹೋದರಿಯರು ಹಾಗೂ ಶತ್ರುಗಳಲ್ಲ ಎಂದು ಹೇಳಿದ್ದಾರೆ. ಇದು ಭಾರಿ ವಿವಾದಕ್ಕೆ ಕಾರಣವಾಗಿದೆ,

 

Share Post