HealthNational

ರಾಷ್ಟ್ರಪತಿ ಮುರ್ಮು ಅವರ ಬಲಗಣ್ಣಿಗೆ ಶಸ್ತ್ರಚಿಕಿತ್ಸೆ

ನವದೆಹಲಿ; ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ರಾಷ್ಟ್ರಪತಿಗಳಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆದಿದೆ.

ರಾಷ್ಟ್ರಪತಿ ಮುರ್ಮು ಅವರು ತಮ್ಮ ಬಲಗಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ರಾಷ್ಟ್ರಪತಿಗಳು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ದ್ರೌಪದಿ ಮುರ್ಮು ಅವರು ಅಕ್ಟೋಬರ್‌ 16ರಂದು ಎಡಗಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

Share Post