CrimeInternational

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ; 40ಕ್ಕೂ ಮಂದಿ ಸಾವು

ಜಕಾರ್ತ್; ಇಂಡೋನೆಷ್ಯಾದ ಜಾವಾದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಘಟನೆಯಲ್ಲಿ 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ ಭೂಮಿ ಕಂಪಿಸಿದ್ದು, ಹಲವು ಕಟ್ಟಡಗಳು ನೆಲಸಮವಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ದಕ್ಷಿಣ ಆಗ್ನೇಯ ಭಾಗದ 75 ಕಿ.ಮೀ.ವರೆಗೆ ಭೂಮಿ ಕಂಪಿಸಿದೆ. ಭೂಕಂಪ ಸಂಭವಿಸಿ 2 ಗಂಟೆ ಕಳೆದರೂ ಜನ ಭಯಭೀತರಾಗಿ ಒಂದೇ ಕಡೆ ಕುಳಿತಿದ್ದ ದೃಶ್ಯ ಕಂಡುಬಂತು.

Share Post