CrimeInternational

ಚೀನಾದಲ್ಲಿ ನಡೆದ ಅಗ್ನಿ ದುರಂತಕ್ಕೆ 38 ಮಂದಿ ಬಲಿ

ಬೀಜಿಂಗ್‌; ಚೀನಾದ ಹನನ್‌ ಪ್ರಾಂತ್ಯದ ಅನ್ಯಾಂಗ್‌ ನಗರದ ವಾಣಿಜ್ಯ ವ್ಯವಹಾರ ಸಂಸ್ಥೆಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ. ದುರಂತದಲ್ಲಿ ಸುಮಾರು 38 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗ ನಾಲ್ಕು ಗಂಟೆಗಳ ಕಾಲ ಹರಸಾಹಸಪಟ್ಟರು. 38 ಜನರು ಮೃತಪಟ್ಟರೆ, ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 63 ವಾಹನಗಳು ಮತ್ತು 240 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share Post