ಕದ್ರಿ ದೇವಸ್ಥಾನದ ಮೇಲೆ ಉಗ್ರರ ಟಾರ್ಗೆಟ್; ಭದ್ರತೆ ಒದಗಿಸಲು ಪೊಲೀಸರಿಗೆ ಮನವಿ
ಮಂಗಳೂರು; ಉಗ್ರರು ಕದ್ರಿ ದೇವಸ್ಥಾನ ಟಾರ್ಗೆಟ್ ಮಾಡಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕದ್ರಿ ಠಾಣೆಯಲ್ಲಿ ದೂರು ನೀಡಲಾಗಿದ್ದು, ಸೂಕ್ತ ಭದ್ರತೆ ಒದಗಿಸುವಂತೆ ಮನವಿ ಮಾಡಲಾಗಿದೆ.
ಕದ್ರಿ ದೇಗುಲ ಟಾರ್ಗೆಟ್ ಮಾಡಲಾಗಿತ್ತು ಎಂಬ ಸಂದೇಶಗಳು ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ದೇಗುಲಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಹೀಗಾಗಿ ಸೂಕ್ತ ಭದ್ರತೆ ಒದಗಿಸಬೇಕೆಂದು ಮನವಿ ಮಾಡಲಾಗಿದೆ.
ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಸಂಸ್ಥೆ ಕದ್ರಿ ದೇವಸ್ಥಾನಕ್ಕೆ ಬೆದರಿಕೆ ಹಾಕಿತ್ತು. ಕದ್ರಿ ದೇವಸ್ಥಾನವೇ ನಮ್ಮ ಟಾರ್ಗೆಟ್ ಆಗಿತ್ತು ಎಂದು ಹೇಳಿಕೊಂಡ ಪೋಸ್ಟ್ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ.ʼ