ಭಾರತ್ ಜೋಡೋ ಯಾತ್ರೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಬಿಜೆಪಿ ಆರೋಪ
ನವದೆಹಲಿ; ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದಲ್ಲಿ ಸಾಗುತ್ತಿದೆ. ಖಾರ್ಗೋನ್ನಲ್ಲಿ ಯಾತ್ರೆ ಹೋಗುತ್ತಿರುವಾಗ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆಯೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿಡಿಯೋವೊಂದನ್ನು ಬಿಜೆಪಿ ನಾಯಕ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ. ಇದೇ ವಿಡಿಯೋವನ್ನು ಮಧ್ಯಪ್ರದೇಶ ಕಾಂಗ್ರೆಸ್ ಕೂಡಾ ಟ್ವೀಟ್ ಮಾಡಿತ್ತು. ಅನಂತರ ಡಿಲೀಟ್ ಮಾಡಿದೆ ಎಂದು ಆರೋಪ ಮಾಡಿದ್ದಾರೆ.
ಆದರೆ, ಈ ಆರೋಪವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಳ್ಳಿಹಾಕಿದ್ದಾರೆ. ಅಮಿತ್ ಮಾಳವಿಯ ಹಂಚಿಕೊಂಡಿರುವ ವಿಡಿಯೊ ತಿರುಚಲಾಗಿರುವ ವಿಡಿಯೋ ಎಂದು ಹೇಳಿದ್ದಾರೆ.