Bengaluru

ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವ ವಿಚಾರ; ಸುದ್ದಿ ಅಲ್ಲಗೆಳೆದ ಶಿಕ್ಷಣ ಸಚಿವ

ಬೆಂಗಳೂರು; ಪ್ರತ್ಯೇಕ ಮುಸ್ಲಿಂ ಕಾಲೇಜುಗಳನ್ನು ಸ್ಥಾಪಿಸುವ ಉದ್ದೇಶ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ರಾಜ್ಯ ಸರ್ಕಾರದಿಂದ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ ಎಂಬ ಸುದ್ದಿ ಹಬ್ಬಿದೆ. ಆದ್ರೆ ಇದು ಸುಳ್ಳು. ಇಂತಹ ಯಾವುದೇ ಪ್ರಸ್ತಾವನೆ ಶಿಕ್ಷಣ ಇಲಾಖೆ ಮುಂದಿಲ್ಲ. ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕೂ ಇಲ್ಲ ಎಂದಿದ್ದಾರೆ.

ಉಡುಪಿಯಲ್ಲಿ ಹಿಜಾಬ್‌ ವಿವಾದ ಶುರುವಾದ ಮೇಲೆ ಶಾಲಾ ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಇದರಿಂದಾಗಿ ಮುಸ್ಲಿಂ ಸಂಘ ಸಂಸ್ಥೆಗಳು ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು. ಮುಸ್ಲಿಂ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ್ದರು. ಹೀಗಾಗಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಸರ್ಕಾರವೇ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲು ಮುಂದಾಗಿದೆ ಎಂದು ಹೇಳಲಾಗಿತ್ತು. ಆದ್ರೆ ಸಚಿವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ರಾಜ್ಯ ಸರ್ಕಾರ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ಮುಂದಾಗಿದೆ ಎನ್ನಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮುಂದಿನ ತಿಂಗಳು ಈ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ ಎನ್ನಲಾಗ್ತಿದೆ.

Share Post