BengaluruDistricts

ಮಹಾರಾಷ್ಟ್ರ ಮಂತ್ರಿಗಳು ಬೆಳಗಾವಿ ಬರುವುದು ಸೂಕ್ತವಲ್ಲ; ಸಿಎಂ ಬೊಮ್ಮಾಯಿ

ಬೆಂಗಳೂರು; ಗಡಿ ವಿವಾದವಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮಂತ್ರಿಗಳು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ ಲಿಖಿತವಾಗಿ ಸೂಚಿಸಿದ್ದರೂ ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರುತ್ತಿರುವುದು ಸೂಕ್ತವಲ್ಲ ಎಂದರು.

ಯಾರು ಎಲ್ಲಿ ಬೇಕಾದರೂ ಓಡಾಡುವ ಸ್ವಾತಂತ್ರ್ಯ ವಿದೆ ಎಂದು ನಮಗೂ ತಿಳಿದಿದೆ. ಆದರೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್‌ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಮ್ಮ ಸರ್ಕಾರ ಕೆಲವು ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು. ಗಡಿ ವಿವಾದ ಬಗೆಹರಿದಿದ್ದರೂ ಸುಪ್ರೀಂ ಕೋರ್ಟಿನಲ್ಲಿ ವ್ಯಾಜ್ಯ ಹೂಡಿದ್ದಾರೆ. ಕಾನೂನಾತ್ಮಕ ವಾಗಿ ಇಬ್ಬರೂ ಹೋರಾಡುತ್ತೇವೆ. ಆದರೆ ಎರಡೂ ರಾಜ್ಯದ ಜನರು ಸಾಮರಸ್ಯದಿಂದಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕದಡುವ ಯಾವುದೇ ಕೆಲಸ ಮಾಡಬಾರದು ಎಂದು ಮಹಾರಾಷ್ಟ್ರ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ಸಿಎಂ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

Share Post