ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರ; ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ
ಕೋಲಾರ; ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿವೆ. ಆದ್ರೆ ಕೋಲಾರಲ್ಲಿ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇದ್ದುದರಿಂದ ಸಿದ್ದರಾಮಯ್ಯ ಇಲ್ಲಿ ಸ್ಪರ್ಧೆ ಮಾಡಲು ಸ್ವಲ್ಪ ಹಿಂದೇಟು ಹಾಕಿದ್ದಾರೆ. ಈ ನಡುವೆ ನಡೆದ ಸಭೆಯಲ್ಲಿ ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ.
ಕೋಲಾರ ಕಾಂಗ್ರೆಸ್ ಕಚೇರಿಯ ಬಳಿ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಕೆ.ಎಚ್ ಮುನಿಯಪ್ಪ ಎದುರಲ್ಲೇ ಕಾರ್ಯಕರ್ತರು ಕೂಗಾಟ, ನೂಕಾಟ ನಡೆಸಿದ್ದಾರೆ. ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಅವರ ನಡುವಿನ ವೈಮನಸ್ಯದಿಂದಲೇ ಸಿದ್ದರಾಮಯ್ಯ ಇಲ್ಲಿ ಸ್ಪರ್ಧೆ ಮಾಡಲು ಹಿಂದೇಟು ಹಾಕುತ್ತಿದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮಿಬ್ಬರ ಜಗಳದಿಂದ ಸಿದ್ದರಾಮಯ್ಯ ಇಲ್ಲಿ ನಿಲ್ಲೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ನೀವಿಬ್ಬರೂ ಬಣಗಳನ್ನು ಕಟ್ಟಿಕೊಂಡಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಹಾಳಾಗ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಎಲ್ಲರನ್ನೂ ಸಮಾಧಾನಪಡಿಸಿದ ನಂತರ ಮಾತನಾಡಿದ ಕೆ.ಎಚ್.ಮುನಿಯಪ್ಪ ಅವರು, ಇಬ್ಬರು, ಮೂವರು ಗೊಂದಲ ಸೃಷ್ಟಿಸಿದ್ದಾರೆ ಅಷ್ಟೇ. ಗುಂಪುಗಾರಿಕೆ, ಗೊಂದಲಗಳು ಇವೆ. ಸರಿ ಮಾಡಿ ಬನ್ನಿ ಎಂದು ಸಿದ್ದರಾಮಯ್ಯಗೆ ಎಚ್ಚರಿಸಿದ್ದೇನೆ. ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದ್ರೆ ಸಿದ್ದರಾಮಯ್ಯ ಪರ ಕೆಲಸ ಮಾಡುತ್ತೇವೆ ಎಂದು ಹೇಳಿದರು.