ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯದಲ್ಲಿ ಕೊಂಚ ಚೇತರಿಕೆ
ಬೆಂಗಳೂರು; ಸ್ಯಾಂಡಲ್‌ವುಡ್ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ. ಮೂರು ದಿನಗಳ ಹಿಂದೆ ಅವರು ಆರೋಗ್ಯ ಏರುಪೇರಾಗಿದ್ದು, ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಭಗವಾನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ಭಗವಾನ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. 89 ವರ್ಷದ ಭಗವಾನ್ ಅವರು ಶೀತ ಮತ್ತು ಜ್ವರದಿಂದ ಬಳಲುತ್ತಿದ್ದು, ಮೂರು ದಿನದ ಹಿಂದ ಎಉಸಿರಾಟದ ಸಮಸ್ಯೆ ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.