BengaluruCrime

ಮಾನ್ಯತಾ ಗ್ರೂಪ್‌ ಮೇಲೆ ಇಡಿ ಅಧಿಕಾರಿಗಳ ದಾಳಿ

ಬೆಂಗಳೂರು; ಉದ್ಯಾನನಗರಿಯ ಅತಿ ದೊಡ್ಡ ರಿಯಲ್‌ ಎಸ್ಟೇಟ್‌ ಕಂಪನಿ ಮಾನ್ಯತಾ ಗ್ರೂಪ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಿಚ್ಮಂಡ್‌ ರಸ್ತೆಯಲ್ಲಿರುವ ಮಾನ್ಯತಾ ಗ್ರೂಪ್‌ನ ಕೇಂದ್ರ ಕಚೇರಿ ಹಾಗೂ ಅದರ ಇತರ ಹಲವು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಏಕಕಾಲದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಹಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

ಇನ್ನೋವಾ ಕಾರುಗಳಲ್ಲಿ ಆಗಮಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಎಲ್ಲೆಡೆ ಪರಿಶೀಲಿಸುತ್ತಿದ್ದಾರೆ. ಮಾನ್ಯತಾ ಗ್ರೂಪ್‌ ಮುಖ್ಯಸ್ಥರಿಗೆ ಸೇರಿದ ಸದಾಶಿವನಗರದ ಮನೆ ಮೇಲೂ ದಾಳಿ ಮಾಡಲಾಗಿದೆ. ವ್ಯವಹಾರದಲ್ಲಿ ಅಕ್ರಮ ನಡೆಸಿದ್ದಾರೆಂಬ ಆರೋಪದ ಮೇಲೆ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

 

Share Post