HealthNationalPolitics

ಜಗನ್‌ ಮೋಹನ್‌ ರೆಡ್ಡಿ ಸಹೋದರಿ ಶರ್ಮಿಲಾ ಆಸ್ಪತ್ರೆಗೆ ದಾಖಲು

ಹೈದರಾಬಾದ್; ಪಾದಯಾತ್ರೆಗೆ ಅನುಮತಿ ನೀಡದ ತೆಲಂಗಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಆಂಧ್ರ ಸಿಎಂ ಜಗನ್‌ ಮೋಹನ್‌ ರೆಡ್ಡಿ ಸಹೋದರಿ ಶರ್ಮಿಳಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳಿಂದ ಉಪವಾಸ ನಡೆಸುತ್ತಿದ್ದ ಅವರನ್ನು ಪೊಲೀಸರು ಜುಬಿಲಿ ಹಿಲ್ಸ್‌ನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿದಾರೆ.

`ಪ್ರಜಾ ಸಂಸ್ಥಾನಂ’ ಪಾದಯಾತ್ರೆಗೆ ಅನುಮತಿ ನೀಡದ ತೆಲಂಗಾಣ ಸರ್ಕಾರದ ವಿರುದ್ಧ ಶರ್ಮಿಲಾ ಉಪವಾಸ ಅತ್ಯಾಗ್ರ ಆರಂಭಿಸಿದ್ದರು. ಶುಕ್ರವಾರ ಬೆಳಿಗ್ಗೆಯಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಇದೀಗ ಆಸ್ಪತ್ರೆಗೆ ದಾಖಲಿಸಿದ್ದು, ಶರ್ಮಿಳಾ ಅವರ ಆರೋಗ್ಯ ಸ್ಥಿರವಾಗಿದೆ ಅಂತ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Share Post