ಮುಂದುವರೆದ ಮಾಂಡಸ್ ಅವಾಂತರ; 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು; ಮಾಂಡಸ್ ಚಂಡಮಾರುತ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ತುಂತುರು ಮಳೆ ಹಾಗೂ ಮೈಕೊರೆಯುವ ಚಳಿ ಜನರ ದೈನಂದಿನ ಕೆಲಸಗಳಿಗೆ ಅಡ್ಡಿಯಾಗಿದೆ. ಬಹುತೇಕರು ಮನೆಗೇ ಸೀಮಿತರಾಗಿದ್ದಾರೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಇನ್ನೂ ಮೂರು ದಿನ ಇದೇ ಪರಿಸ್ಥಿತಿ ಇರಲಿದೆ. ಹದಿನೈದು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಡಿಸೆಂಬರ್ 15ರವರೆಗೂ ರಾಜ್ಯದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆ ನಿರಂತರವಾಗಿ ಇರಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಬಿಟ್ಟೂ ಬಿಡದೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.