CinemaCrime

ಸ್ಯಾಂಡಲ್‌ವುಡ್‌ ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ

ಬೆಂಗಳೂರು; ಅನುಭವ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ಪ್ರಕಟವಾಗಿದೆ. ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಹೈಕೋರ್ಟ್‌ ಜೈಲು ಶಿಕ್ಷೆ ವಿಧಿಸಿದೆ.

ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿದ ಶಿಕ್ಷೆ ಪ್ರಕಟಿಸಿದೆ. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.

ಕಾಶೀನಾಥ್ ಅವರ ಅನುಭವ ಸಿನಿಮಾ ತಂದು ಕೊಟ್ಟ ಯಶಸ್ಸಿನ ಬಳಿಕ ಸ್ಟಾರ್​ ನಟಿ ಎನಿಸಿಕೊಂಡಿದ್ದ ಅಭಿನಯಾ ಇದೀಗ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ. ತಮ್ಮ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ ಇಟ್ಟು ಪಾಲಕರ ಜೊತೆ ಸೇರಿ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಹೈಕೋರ್ಟ್ ಶಿಕ್ಷೆ ಪ್ರಕಟಿಸಿದೆ. ನ್ಯಾಯಮೂರ್ತಿ ಎಚ್​.ಬಿ. ಪ್ರಭಾಕರ್ ಶಾಸ್ತ್ರಿ ಅವರನ್ನೊಳಗೊಂಡ ಏಕಸದಸ್ಯ ಪೀಠದಿಂದ ಆದೇಶ ಹೊರಬಿದ್ದಿದೆ. ಸರ್ಕಾರದ ಪರ ವಕೀಲ ಎಚ್.ವಿ. ವಿನಾಯಕ್ ಅವರು ವಾದ ಮಂಡಿಸಿದ್ದರು.

2002ರಲ್ಲಿ ಲಕ್ಷ್ಮೀದೇವಿ ಎಂಬುವವರು ಅಭಿನಯಾ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಮದುವೆಯಾಗಿದ್ದರು. ಮದುವೆ ವೇಳೆ ವರಕ್ಷಿಣೆ ಪಡೆದಿದ್ದಲ್ಲದೆ, ನಂತರವೂ ಪದೇಪದೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು. ವಿವಾಹದ ಸಮಯದಲ್ಲಿ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ಇದಾದ ನಂತರವೂ 1 ಲಕ್ಷ ರೂ.ಗೆ ಬೇಡಿಕೆ ಇಟ್ಟು 20 ಸಾವಿರ ಪಡೆದ ನಂತರವೂ ಕಿರುಕುಳ ಕೊಡುತ್ತಿದ್ದರು. ಹಣ ಕೊಟ್ಟರೂ ಸಹ ನನ್ನನ್ನು ಪಾಲಕರ ಮನೆಯಲ್ಲಿ ಬಿಟ್ಟಿದ್ದರು ಎಂದು ದೂರಿನಲ್ಲಿ ಲಕ್ಷ್ಮೀದೇವಿ ಆರೋಪಗಳ ಸುರಿಮಳೆಗೈದಿದ್ದರು.

 

Share Post