ಚಿರಂಜೀವಿ ಸರ್ಜಾಗೆ ಮರಣೋತ್ತರ ಕನ್ನಡ ಕಲಾಭೂಷಣ ಪ್ರಶಸ್ತಿ
ಬೆಂಗಳೂರು; 2022ರ ಕರುನಾಡ ಸಂಭ್ರಮ ಮುಕ್ತಾಯವಾಗಿದೆ. ಎರಡು ದಿನ ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸ್ಟಾರ್ ನಟ, ನಟಿಯರು ಪಾಲ್ಗೊಂಡಿದ್ದರು. ಇದೇ ವೇಳೆ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿತು.
ಚಿರಂಜೀವಿ ಸರ್ಜಾ ಸಹೋದರ, ನಟ ಧ್ರುವ ಸರ್ಜಾ ಪ್ರಶಸ್ತಿಯನ್ನು ಸ್ವೀಕಾರ ಮಾಡಿದರು. ಈ ವೇಳೆ ಸಂಸದ ಡಿ.ಕೆ.ಸುರೇಶ್, ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.